ಕೌಡಿಚ್ಚಾರ್:ಬೈಕ್ ಮತ್ತು ಪಿಕಪ್ ನಡುವೆ ಡಿಕ್ಕಿ-ಬೈಕ್ ಸವಾರ ಮೃತ್ಯು
ಕೌಡಿಚ್ಚಾರ್:ಬೈಕ್ ಮತ್ತು ಪಿಕಪ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಕೌಡಿಚ್ಚಾರು ಪಳ್ಳ ಎಂಬಲ್ಲಿ ಫೆ.15ರಂದು ನಡೆದಿದೆ. ಅರಿಯಡ್ಕ ಗ್ರಾಮದ ಪಾಪೆಮಜಲು ಪಾದಲಾಡಿ ಸುಂದರ ಪೂಜಾರಿ (60.ವ) ಮೃತಪಟ್ಟವರು.
ಸುಂದರ ಪೂಜಾರಿ ಅವರು ಬೈಕ್‌ನಲ್ಲಿ ಕೌಡಿಚ್ಚಾರು ಮದಕ ಕಡೆ ಹೋಗುತ್ತಿದ್ದ ವೇಳೆ ಪಿಕಪ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಸುಂದರ ಪೂಜಾರಿ ಅವರು ತೀವ್ರ ಗಾಯಗೊಂಡಿದ್ದು,ಅವರನ್ನು ಸಂದೀಪ್ ಎಂಬವರ ಆಟೋ ರಿಕ್ಷಾದಲ್ಲಿ ಪುತ್ತೂರು ಧನ್ವಂತರಿ ಆಸ್ಪತ್ರೆಗೆ ದಾಖಲಿಸಿದ್ದರು.ಅಲ್ಲಿ ಸುಂದರ ಪೂಜಾರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.