ಟೆಸ್ಟ್ ಕ್ರಿಕೆಟ್: ಅಶ್ವಿನ್ ದಾಖಲೆ
ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ದಾಖಲೆಯೊಂದನ್ನು ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ 500 ವಿಕೆಟ್ ಕಿತ್ತ ಸಾಧನೆ ಮಾಡಿದರು. ರಾಜ್ ಕೋಟ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ ಜ್ಯಾಕ್ ಕ್ರಾಲಿ ಅವರನ್ನು ಔಟ್ ಮಾಡುವ ಮೂಲಕ ಅಶ್ವಿನ್ ಅವರು 500ನೇ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಅಶ್ವಿನ್ ಅವರು 500 ವಿಕೆಟ್ ಗಳ ವಿಶೇಷ ಗುಂಪಿಗೆ ಸೇರಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ 500 ವಿಕೆಟ್ ಪಡೆದ ವಿಶ್ವದ 9ನೇ ಆಟಗಾರನಾದರು. ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರ ಎಂಬ ಸಾಧನೆ ಮಾಡಿದರು. ಅನಿಲ್ ಕುಂಬ್ಳೆ ಅವರು 619 ವಿಕೆಟ್ ಕಿತ್ತು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.