ಅಂತಾರಾಷ್ಟ್ರೀಯಕ್ರೀಡೆ

ಟೆಸ್ಟ್ ಕ್ರಿಕೆಟ್: ಟೀಂ ಇಂಡಿಯಾದ ಯಶಸ್ವಿ ಜೈಸ್ವಾಲ್ ‘ಸಿಕ್ಸರ್’ ದಾಖಲೆ



ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಸಿಕ್ಸರ್ ಮೂಲಕ ವಿಶೇಷ ದಾಖಲೆ ಮಾಡಿದ್ದಾರೆ. ಅವರು ಒಂದೇ ಇನ್ನಿಂಗ್ಸ್‌ನಲ್ಲಿ ಒಟ್ಟು 12 ಸಿಕ್ಸರ್‌ ಸಿಡಿಸುವ ಮೂಲಕ ಪಾಕಿಸ್ತಾನದ ಮಾಜಿ ಆಟಗಾರ ವಾಸಿಂ ಅಕ್ರಂ ಅವರ ದಾಖಲೆಯನ್ನು ಸರಿಗಟ್ಟಿ ಸಾಧನೆ ಮಾಡಿದ್ದಾರೆ.

ರಾಜ್‌ ಕೋಟ್‌ ನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್‌ ನಲ್ಲಿ ಯಶಸ್ವಿ ಜೈಸ್ವಾಲ್ ಅಂತಾರಾಷ್ಟ್ರೀಯ ಟೆಸ್ಟ್‌ ದ್ವಿಶತಕ ಸಿಡಿಸಿದ್ದು ಇನಿಂಗ್ಸ್‌ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವದ 2ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

1996ರಲ್ಲಿ ಜಿಂಬಾಬ್ವೆ ವಿರುದ್ಧ ಪಾಕ್‌ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ ಅವರು, 12 ಸಿಕ್ಸರ್‌ ಸಿಡಿಸಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು. ಇದೀಗ ಯಶಸ್ವಿ ಜೈಸ್ವಾಲ್ ಅವರು 12 ಸಿಕ್ಸರ್‌ ಸಿಡಿಸುವ ಮೂಲಕ ಆ ದಾಖಲೆಯನ್ನು ಸರಿಗಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!