ಕರಾವಳಿಕ್ರೈಂ

ಪುತ್ತೂರು: ಅನುಮಾನಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು 



ಪುತ್ತೂರು: ಇಲ್ಲಿನ ಮುಕ್ರಂಪಾಡಿ ಜಂಕ್ಷನ್ ನಲ್ಲಿ ತಡರಾತ್ರಿ ಅನುಮಾನಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ಫೆ.19 ರಂದು ತಡ ರಾತ್ರಿ ನಡೆದಿದೆ.

ಪುತ್ತೂರು ನಗರ ಪೊಲೀಸ್ ನಿರೀಕ್ಷಕ ಸತೀಶ್ ಜಿ.ಜೆ, ಪುತ್ತೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳೊಂದಿಗೆ, ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಜಂಕ್ಷನ್‌ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ, ಕಾರಿನಲ್ಲಿ ತಲವಾರು ಪತ್ತೆಯಾಗಿದೆ.

ಕಾರಿನಲ್ಲಿದ್ದ ಗೋಳ್ತಮಜಲು ಗ್ರಾಮ, ಬಂಟ್ವಾಳ ನಿವಾಸಿ ಕಿಶೋರ್‌ (36ವ), ಕಬಕ ಗ್ರಾಮ, ಪುತ್ತೂರು ನಿವಾಸಿ ಮನೋಜ್‌ (23ವ), ಕಬಕ ಗ್ರಾಮ, ಪುತ್ತೂರು ನಿವಾಸಿ ಆಶಿಕ್‌ (28ವ) ಮತ್ತು ಪಡ್ನೂರು ಗ್ರಾಮ, ಪುತ್ತೂರು ನಿವಾಸಿ ಸನತ್‌ ಕುಮಾರ್‌ (24ವ) ಎಂಬವರನ್ನು ವಶಕ್ಕೆ ಪಡೆದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!