ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಎಸ್ಸಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಇಂದು ವಿಕಾಸಸೌಧದಲ್ಲಿ ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 01 ರಿಂದ ಮಾ.22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು.
ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆ ಪರೀಕ್ಷೆ ಬರೆಯಲಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಕಳೆದ ವರ್ಷದಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್ಸಿ ಪರೀಕ್ಷೆ-2 ನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದು ಅವರು ತಿಳಿಸಿದರು.