ಕರಾವಳಿ

ಅಪಘಾತದಲ್ಲಿ ಗಾಯಗೊಂಡಿದ್ದ ಮುಕ್ವೆಯ ಯುವಕ ಮೃತ್ಯು



ಪುತ್ತೂರು: ಸಂಪ್ಯ ಸಮೀಪದ ಕಲ್ಲರ್ಪೆ ಸಮೀಪ ಫೆ.21ರಂದು  ಸಂಜೆ ಟಿಪ್ಪರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮುಕ್ವೆ ನಿವಾಸಿ ಸಫ್ವಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಕ್ವೆ ನಿವಾಸಿ ಅಬ್ದುಲ್ಲಾ ರವರ ಮಗ ಸಫ್ವಾನ್ ಗಂಭೀರ ಗಾಯಗೊಂಡಿದ್ದರು ಕೊಡಲೇ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆ ಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!