ಬಜರಂಗಳ ದಳದ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಕ್ಷಮೆ ಯಾಚಿಸಿದ ಆರ್ ಅಶೋಕ್?!
ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ಆಗ್ರಹವೊಂದನ್ನು ಮಾಡುವ ವೇಳೆ ತನ್ನ ಅಧಿಕಾರಾವಧಿಯ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಇದೀಗ ಬಜರಂಗ ದಳ ಕಾರ್ಯಕರ್ತರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ನಾನು ಗೃಹ ಸಚಿವನಾಗಿದ್ದಾಗ ಘಟನೆಯೊಂದಕ್ಕೆಸಂಬಂಧಿಸಿ ಒತ್ತಡ ಇದ್ದರೂ ಬಜರಂಗದಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ಹಾಕಿದ್ದೆ ಎನ್ನುವ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ಸ್ವಪಕ್ಷ, ಸಂಘಟನೆ ಒಳಗೇ ಆಕ್ರೋಶ ವ್ಯಕ್ತವಾಗಿದ್ದು, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್ ಅವರನ್ನು ತೆಗೆದು ಹಾಕುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಪತ್ರ ಬರೆದು ಒತ್ತಾಯಿಸಿವೆ. ಈ ಹಿನ್ನೆಲೆಯಲ್ಲಿ ಆರ್ ಅಶೋಕ್ ಕ್ಷಮೆ ಯಾಚಿಸಿದ್ದಾರೆ ಎಂದು ತಿಳಿದು ಬಂದಿದೆ.