ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಸಿ.ಟಿ ರವಿ ಹೇಳಿದ್ದೇನು..?
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರದಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ನಾನು ಯಾವುದೇ ಬೇಡಿಕೆಯಿಟ್ಟಿಲ್ಲ, ಪಕ್ಷ ಬಯಸಿದರೆ ನಾನು ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು ನಾನು ಪಕ್ಷದಿಂದ ಏನನ್ನೂ ಕೇಳಿಲ್ಲ, ಪಕ್ಷದ ಆದೇಶದಂತೆ ನಡೆದುಕೊಂಡಿದ್ದೇನೆ, ಮತ್ತೊಮ್ಮೆ ಮೋದಿ ಸರಕಾರ ರಚಿಸುವುದೇ ನಮ್ಮ ಗುರಿ. ಬಿಜೆಪಿಯನ್ನು ಗೆಲ್ಲಿಸಲು, ನಾನು ಎಲ್ಲವನ್ನೂ ಮಾಡುತ್ತೇನೆ ಎಂದು ಸಿ.ಟಿ ರವಿ ಹೇಳಿದರು.