ಕಡಬ: ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ: ಪ್ರೇಮ ವೈಫಲ್ಯಕ್ಕೆ ಬೇಸತ್ತು ಕೃತ್ಯ..?
ಕಡಬ: ಮಾ.4ರಂದು ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜು ಕಡಬ ಇದರ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜು ಆವರಣದಲ್ಲಿ ವ್ಯಕ್ತಿಯೊಬ್ಬ ಆಸಿಡ್ ಎರಚಿರುವ ಘಟನೆ ನಡೆದಿದ್ದು ಘಟನೆಯ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೂ ಆಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿರುತ್ತದೆ. ಈಗಾಗಲೇ ಆರೋಪಿ ಅಬೀನ್ (23. ವ) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಮತ್ತು ಆಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.