ಬೆಂಗಳೂರು ಬಾಂಬ್ ಸ್ಪೋಟ: ಕಾಂಗ್ರೆಸ್, ಬಿಜೆಪಿ ವಿರುದ್ಧ ಮುತಾಲಿಕ್ ವಾಗ್ದಾಳಿ
ಬೆಂಗಳೂರು ಬಾಂಬ್ ಸ್ಪೋಟದ ಬಗ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ಇದು ಪೂರ್ವಯೋಜಿತ ಕೃತ್ಯ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಬಿಜೆಪಿ, ಕಾಂಗ್ರೆಸ್ ನಾಯಕರು ಬಾಯಿ ಮುಚ್ಚಿಕೊಂಡಿರಲಿ ಮುತಾಲಿಕ್ ಹೇಳಿದ್ದಾರೆ.
ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸಲಿದೆ. ಬಿಜೆಪಿ ಅವಧಿಯಲ್ಲಿಯೂ ಸ್ಫೋಟ ನಡೆದಿತ್ತು. ಕಾಂಗ್ರೆಸ್ ಅವಧಿಯಲ್ಲೂ ನಡೆದಿದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯದ ಪರಿಣಾಮವೇ ಪದೇ ಪದೇ ಬಾಂಬ್ ಸ್ಫೋಟಕ್ಕೆ ಕಾರಣ ಎಂದರು.