ಪಾಕಿಸ್ತಾನ ಪರ ಘೋಷಣೆ ಆರೋಪ: ಮೂವರ ಬಂಧನ
ಬೆಂಗಳೂರು: ವಿಧಾನಸೌಧದ ಕಾರಿಡಾರ್ ನಲ್ಲಿ ‘ಪಾಕಿಸ್ಥಾನ ಜಿಂದಾಬಾದ್’ ಎಂಬ ದೇಶದ್ರೋಹಿ ಘೋಷಣೆ ಕೂಗಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ವಿಧಾನ ಸೌಧ ಠಾಣೆಯ ಪೊಲೀಸರು ಇಲ್ತಾಜ್ , ಮುನಾವರ್ ಮತ್ತು ಮೊಹಮದ್ ನಾಶಿಪುಡಿ ಎಂಬವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ನಾಸಿರ್ ಹುಸೇನ್ ಅವರು ಜಯ ಸಾಧಿಸಿದ ಬಳಿಕ ಸಂಭ್ರಮಾಚರಣೆ ನಡೆಸುವ ವೇಳೆ ಘೋಷಣೆ ಕೇಳಿ ಬಂದಿರುವ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಹಲವು ವೀಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪ್ರಯೋ ಗಾಲಯ(ಎಫ್ಎಸ್‌ಎಲ್)ಕ್ಕೆ ಕಳುಹಿಸಲಾಗಿದೆ.