ರಾಜಕೀಯರಾಜ್ಯ

ಲೋಕಸಭೆ ಚುನಾವಣೆ: ಬಿಜೆಪಿಯಿಂದ ಇಂದು ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ?



ಬೆಂಗಳೂರು: ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಮಾ.7ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ. ಈಗಾಗಲೇ 195 ಲೋಕಸಭಾ ಸ್ಥಾನಗಳ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿಯ ಇನ್ನೊಂದು ಸುತ್ತಿನ ಮಹತ್ವದ ಸಭೆ ಇಂದು ದಿಲ್ಲಿಯಲ್ಲಿ ನಡೆಯಲಿದ್ದು ಅದರಲ್ಲಿ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಎಲ್ಲ 28 ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿದೆ.



ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಇರಲಿಲ್ಲ.‌ ಆದರೆ ಇಂದು ಬಿಡುಗಡೆಯಾಗುವ ಎರಡನೇ ಪಟ್ಟಿಯಲ್ಲಿ ರಾಜ್ಯದ 28 ಲೋಕಸಭಾ ಅಭ್ಯರ್ಥಿಗಳ ಹೆಸರು ಕೂಡ ಇರಲಿದ್ದು ಪಟ್ಟಿ ಬಿಡುಗಡೆಯ ಬಗ್ಗೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!