ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ- ರಾಹುಲ್ ಗಾಂಧಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತ್ ಜೋಡೋ ನ್ಯಾಯಾತ್ರೆಯ ಅಂಗವಾಗಿ ಮಧ್ಯಪ್ರದೇಶದ ದಾರ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ದೇಶದಲ್ಲಿ ಜನತೆ ಬದಲಾವಣೆ ಬಯಸಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ.