ರಾಷ್ಟ್ರೀಯ

ಎಲ್.ಪಿ.ಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ: ಪ್ರಧಾನಿ ಮೋದಿ ಘೋಷಣೆ



ಎಲ್.ಪಿ.ಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಪ್ರಕಟಿಸಿರುವ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

‘ಇಂದು ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ. ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಎಂದು ಮೋದಿ ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!