ಲೋಕಸಭಾ ಚುನಾವಣೆ: ಬಿಜೆಪಿಯಿಂದ ಕ್ರಿಕೆಟಿಗ ಮೊಹಮ್ಮದ್ ಶಮಿ ಸ್ಪರ್ಧೆ..?
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಿಂದ ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶ ಮೂಲದವರಾದ ಮೊಹಮ್ಮದ್ ಶಮಿ ಅವರು ಬಂಗಾಳದ ತಂಡದ ಪರ ರಣಜಿ ಟ್ರೋಫಿ ಪಂದ್ಯಗಳನ್ನಾಡಿದ್ದಾರೆ. ಈಗಲೂ ದೇಶಿಯ ಕ್ರಿಕೆಟ್ ನಲ್ಲಿ ಬಂಗಾಳವನ್ನೇ ಶಮಿ ಪ್ರತಿನಿಧಿಸುತ್ತಿದ್ದಾರೆ.
ಕಳೆದ ಏಕದಿನ ವಿಶ್ವಕಪ್ ನಲ್ಲಿ ಅತ್ಯದ್ಭುತ ಬೌಲಿಂಗ್ ಶಮಿ ಗಮನ ಸೆಳೆದಿದ್ದರು.
ಬಿಜೆಪಿ ಈಗಾಗಲೇ ಶಮಿ ಅವರನ್ನು ಚುನಾವಣೆ ಸ್ಪರ್ಧೆ ಬಗ್ಗೆ ಸಂಪರ್ಕಿಸಿದೆ ಎನ್ನಲಾಗಿದ್ದು ಆದರೆ ಶಮಿ ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ.