ಲೋಕಸಭಾ ಚುನಾವಣೆ: ಕರ್ನಾಟಕ ಸೇರಿದಂತೆ 37 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್, ಅಜಯ್ ಮಕೇನ್, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಿಕ್ಕಿಂ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಒಟ್ಟು 39 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.
ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟಗೊಳಿಸಿದೆ. ಶಿವಮೊಗ್ಗ- ಗೀತಾ ಶಿವರಾಜ್ ಕುಮಾರ್,
ತುಮಕೂರು- ಎಸ್ಪಿ ಮುದ್ದಹನುಮೇಗೌಡ,
ಮಂಡ್ಯ- ವೆಂಕಟರಾಮೇಗೌಡ (ಸ್ಟಾರ್ ಚಂದ್ರು),
ಹಾಸನ- ಶ್ರೇಯಸ್ ಪಟೇಲ್,
ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್,
ವಿಜಯಪುರ- ಎಚ್ಆರ್ ಅಲ್ಗೂರ್, ಹಾಗೂ
ಹಾವೇರಿಯಿಂದ ಆನಂದ್ ಸ್ವಾಮಿ ಗಡ್ಡ ದೇವರಮಠ ಅವರನ್ನು ಘೋಷಿಸಿದೆ.