ನನಗೆ ಟಿಕೆಟ್ ತಪ್ಪಿಸಲು ಪಿತೂರಿ ನಡೆಯುತ್ತಿದೆ-ಶೋಭಾ ಕರಂದ್ಲಾಜೆ
ಉಡುಪಿ–ಚಿಕ್ಕಮಗಳೂರು ಕ್ಷೇತ್ರದಲ್ಲಿ ನನಗೆ ಟಿಕೆಟ್ ತಪ್ಪಿಸಲು ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಯಾವಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ಹೇಳುತ್ತಿದ್ದರು ಎಂದು ಹೇಳಿದ್ದಾರೆ.
ನನ್ನನ್ನು ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆ, ಅದಕ್ಕಾಗಿ ನಮ್ಮ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.