ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ- ಡಿ.ವಿ.ಎಸ್
ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಡಿ ವಿ ಸದಾನಂದ ಗೌಡ ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲೂ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಾನು ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. ನನಗೆ ಟಿಕೆಟ್ ನೀಡದೇ ಇದ್ದರೆ ಸ್ವಲ್ಪ ನೋವಾಗುತ್ತೆ ಎಂದು ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರೂ ಆಗಿರುವ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಚುನಾವಣಾ ಸಕ್ರಿಯ ರಾಜಕಾರಣದಿಂದ ತಾನು ನಿವೃತ್ತಿ ಹೊಂದುತ್ತಿರುವುದಾಗಿ ಕೆಲ ಸಮಯದ ಹಿಂದೆಯಷ್ಟೆ ಘೋಷಿಸಿದ್ದ ಪುತ್ತೂರಿನ ಮಾಜಿ ಶಾಸಕ, ದ.ಕ.ಲೋಕಸಭಾ ಕ್ಷೇತ್ರದ ಮಾಜಿ ಸಂಸದರೂ ಆಗಿರುವ ಡಿ.ವಿ.ಸದಾನಂದ ಗೌಡ ಅವರು ಇದೀಗ ಈ ರೀತಿ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ಡಿವಿ ಸದಾನಂದ ಗೌಡ ಅವರಿಗೆ ಪಕ್ಷದ ವರಿಷ್ಠರು ಟಿಕೆಟ್ ನೀಡುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ.