ಕರಾವಳಿ

ಬೆಳಂದೂರು: ಈಡನ್ ಗ್ಲೋಬಲ್ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ
ಈಡನ್ ಗ್ಲೋಬಲ್ ಶಾಲೆಯಲ್ಲಿ 2023-24 ನೇ ಶೈಕ್ಷಣಿಕ ವರ್ಷದ ರಕ್ಷಕ ಶಿಕ್ಷಕ ಸಭೆ ನಡೆಯಿತು. ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲೆಯ ಪ್ರಾಂಶುಪಾಲರಾದ ರಂಝಿ ಮುಹಮ್ಮದ್ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಪುತ್ತು ಬಾವ ಹಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಅಶ್ರಫ್ ಶಾ ಮಾಂತೂರ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಾಲೆಯ ಶೈಕ್ಷಣಿಕ ಬೆಳವಣಿಗೆ ಹಾಗೂ ಮುಂದಿನ ವರ್ಷದ ಯೋಜನೆಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಹಾವೇರಿ ವಿವೇಕಾನಂದ ಶಾಲೆಯ ಆಡಳಿತ ನಿರ್ದೇಶಕರು ಹಾಗೂ ಪ್ರಮುಖ ವಿದ್ವಾಂಸರಾದ ಮುಸ್ತಫಾ ಮುಯಿನಿ ಮಕ್ಕಳ ಬೆಳವಣಿಗೆಯಲ್ಲಿ ಹೆತ್ತವರ ಪಾತ್ರ ಎಂಬ ವಿಷಯವನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ಮ್ಯಾಗಜಿನಿನ ಮುಖ ಪುಟ ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಹಾಗೂ ಈ ವರ್ಷ ನಡೆದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿ ಮತ್ತು ತರಗತಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ನಂತರ ಸಂಸ್ಥೆಯ ಕಾರ್ಯದರ್ಶಿಯಾದ ಬಶೀರ್ ಹಾಜಿ ಪೋಷಕರನ್ನುದ್ದೇಶಿಸಿ ಮಾತನಾಡಿದರು. ಶಿಕ್ಷಕರಾದ ಕುಮಾರಿ ಪ್ರಜ್ವಲ, ಶ್ರೀಮತಿ ಸೋಫಿಯಾ ರೋಚ್, ಶ್ರೀಮತಿ ಮುನೀಝಾ, ಶ್ರೀಮತಿ ಪವಿತ್ರ ಹಾಗೂ ಇಮ್ತಿಯಾಝ್ ಸಿ.ಎಂ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಮಾತಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಜಾಕ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕರಾಟೆ ಪ್ರದರ್ಶನ ನಡೆಯಿತು .ಶಿಕ್ಷಕಿಯರಾದ ಕುಮಾರಿ ಫಾತಿಮತ್ ಅಮೀರ ಹಾಗೂ ಕುಮಾರಿ ಸಿನ್ವಾನ ಕಾರ್ಯಕ್ರಮ ನಿರೂಪಿಸಿದರು. ರಶೀದ್ ಸಖಾಫಿ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!