ಕ್ರಿಕೆಟಿಗ ಯೂಸುಫ್ ಪಠಾಣ್ ರಾಜಕೀಯಕ್ಕೆ ಎಂಟ್ರಿ-ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ
ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ಯೂಸುಫ್ ಪಠಾಣ್ ಅವರು ರಾಜಕೀಯ ಪ್ರವೇಶ ಮಾಡಿದ್ದಾರೆ. ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ.
ಬರೋಡಾದ ಆಟಗಾರ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪ್ರವೇಶಕ್ಕೆ ಇಳಿದಿದ್ದು, ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಯೂಸುಫ್ ಪಠಾಣ್ ಸ್ಪರ್ಧಿಸಲಿದ್ದಾರೆ. ಬರ್ಹಾಂಪೋರ್ ಕ್ಷೇತ್ರದಲ್ಲಿ ಟಿಎಂಸಿ ಚಿಹ್ನೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ. ಆ ಮೂಲಕ ರಾಜಕೀಯದಲ್ಲೂ ತನ್ನ ಛಾಪು ಮೂಡಿಸಲು ಸಿದ್ದರಾಗಿದ್ದಾರೆ.