ಕರಾವಳಿರಾಜ್ಯ

ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಮುಂದುವರಿದ ಬಿಜೆಪಿ ಕಾರ್ಯಕರ್ತರ ಆಕ್ರೋಶ




ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವಾಗಿ ಕಾರ್ಯಕರ್ತರು ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದು, ಹಾಲಿ ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಈ ಬಾರಿ ಟಿಕೆಟ್ ಕೊಡದಂತೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಈ ಬಾರಿ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿದರೆ ಕೆಲಸ ಮಾಡಲ್ಲ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಆಕ್ರೋಶ ತೀವ್ರಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆ ರದ್ದುಗೊಂಡಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!