ರಾಜ್ಯದಲ್ಲಿ ಕಾಟನ್ ಕ್ಯಾಂಡಿ ನಿಷೇಧ – ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ
ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. ಇನ್ನು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುತ್ತದೆ. ಕ್ಯಾಂಡಿ ಬ್ಯಾನ್ ಮಾರಾಟ ಮಾಡಿದರೇ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗಡೆ ಆಹಾರ ಸೇವನೆ ಮಾಡುತ್ತಾರೆ. ಇದರಿಂದ ಕ್ಯಾನ್ಸರ್ ಹಾಗೂ ಅಸಾಂಕ್ರಮಿಕ ಖಾಯಿಲೆ ಏರಿಕೆಯಾಗುತ್ತಿದೆ. ಸರಿಯಾದ ಆಹಾರ ತಯಾರು ಮಾಡದಿರುವುದು ಸಮಸ್ಯೆಗೆ ಕಾರಣವಾಗಿದೆ. ಹೆಚ್ಚು ಕೊಬ್ಬುಕಾರಕ, ಉಪ್ಪು ಹಾಗೂ ಸಕ್ಕರೆಯ ಆಹಾರ ಬಳಕೆಯಾಗುತ್ತಿದೆ. ಹೀಗಾಗಿ 171 ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಿದ್ದೇವೆ. ಇದರಲ್ಲಿ 107 ಮಾದರಿಯಲ್ಲಿ ಕೃತಕ ಬಣ್ಣ ಕಂಡು ಬಂದಿದೆ. 64 ಸುರಕ್ಷಿತವಾದ ಮಾದರಿಗಳು ಕಂಡು ಬಂದಿದೆ. ಟಾರ್ಟ್ರಾಜಿನ್, ಸನ್ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ನಂತ ಕೃತಕ ಬಣ್ಣಗಳನ್ನು ಬಳಸಲಾಗಿದೆ ಇವು ಆರೋಗ್ಯಕ್ಕೆ ತುಂಬಾ ಅಪಾಯಕಾರಿ ಎಂದು ತಿಳಿಸಿದರು.