ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಪದವಿ ಪುರಸ್ಕಾರ
ಈಡನ್ ಗ್ಲೋಬಲ್ ಶಾಲೆಯಲ್ಲಿ ಕಿಂಡರ್ ಗಾರ್ಟನ್ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.ಮೊದಲ ದಿನ ಕಿಂಡರ್ ಗಾರ್ಟೆನ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಪ್ರಾರ್ಥನೆಯ
ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಅದ್ದೂರಿ ಪಥ ಸಂಚಲನದ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಕಿಂಡರ್ ಗಾರ್ಟನ್ ಶಿಕ್ಷಕಿಯಾದ ಕುಮಾರಿ ಇಸ್ಫಾನ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಅಶ್ರಫ್ ಶಾ ಮಂತೂರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಸಯ್ಯದ್ ಮುಹಮ್ಮದ್ ಮಿಹ್ರಾಜ್ ಅಲ್ ಹಾದಿ ತಂಙಳ್ ಹಾಗೂ ಹೊರಿಝಾನ್ ಪಬ್ಲಿಕ್ ಸ್ಕೂಲ್ ವಿಟ್ಲ ಇದರ ಪ್ರಾಂಶುಪಾಲರಾದ ಮನಾಜಿರ್ ಇವರು ತಮ್ಮ ಅತಿಥಿ ಭಾಷಣಗೈದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ಗೌರವಿಸಲಾಯಿತು.ನಂತರ ಸಂಸ್ಥೆಯ ಕಾರ್ಯದರ್ಶಿಯಾದ ಬಶೀರ್ ಹಾಜಿ,ಸಂಸ್ಥೆಯ ಪ್ರಾಂಶುಪಾಲರಾದ ರಂಝೀ ಮುಹಮ್ಮದ್ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಪುತ್ತು ಬಾವ ಹಾಜಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಶಿಕ್ಷಕಿಯಾದ ಶ್ರೀಮತಿ ಜಯ ಲೋಕನಾತ್ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹಾರೈಸಿದರು.ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಜಾಕ್ ಹಾಗೂ ಅರೇಬಿಕ್ ವಿಭಾಗದ ಮುಖ್ಯಸ್ಥರಾದ ರಶೀದ್ ಸಖಾಫಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಕುಮಾರಿ ಆಯಿಷತ್ ಸುನೈನಾ ಹಾಗೂ ಕುಮಾರಿ ಅಫ್ರೀನ್ ಬಾನು ಕಾರ್ಯಕ್ರಮ ನಿರೂಪಿಸಿದರು ಹಾಗೂ ಕುಮಾರಿ ಫಹಿಮಾ ಬಾನು ವಂದಿಸಿದರು.
ಎರಡನೇ ದಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭ ನಡೆಯಿತು.ಪ್ರಾರ್ಥನೆಯ
ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಅದ್ದೂರಿ ಪತ ಸಂಚಲನದ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.ಅರೇಬಿಕ್ ವಿಭಾಗದ ಮುಖ್ಯಸ್ಥರಾದ ರಶೀದ್ ಸಖಾಫಿ ಅತಿಥಿಗಳನ್ನು ಸ್ವಾಗತಿಸಿದರು.ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಅಶ್ರಫ್ ಶಾ ಮಂತೂರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಬಿಬುರಹ್ಮನ್ ಪ್ರಾಂಶುಪಾಲರು ಅಲ್ ಇಹಸನ್ ಮೂಳೂರು, ಮುಹಮ್ಮದ್ ರಿಯಾಝ್ ಕೌನ್ಸಿಲರ್ ಪುತ್ತೂರು ಹಾಗೂ ರಫೀಕ್ ಮಾಸ್ಟರ್ ಸ್ಪೂರ್ತಿದಾಯಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪದವಿ ಪ್ರಧಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ರಂಝಿ ಮುಹಮ್ಮದ್, ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಬಶೀರ್ ಹಾಜಿ ಹಾಗೂ ಪುತ್ತು ಬಾವ ಹಾಜಿ ಮಕ್ಕಳಿಗೆ ಶುಭ ಹಾರೈಸಿದರು.ಹತ್ತನೇ ತರಗತಿಯ ಶಿಕ್ಷಕರಾದ ಶ್ರೀಮತಿ ದಿವ್ಯ ಹಾಗೂ ಇಮ್ತಿಯಾಝ್ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹಾರೈಸಿದರು.ಫಾತಿಮಾ ಸನಾ ಕಾರ್ಯಕ್ರಮವನ್ನು ನಿರೂಪಿಸದರು ಮತ್ತು ಶಿಕ್ಷಕಿಯಾದ ಕುಮಾರಿ ಸಂಶಿದ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.