ಸಿಎಎ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಅಮಿತ್ ಶಾ
ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ದೇಶದಲ್ಲಿ ಜಾರಿಗೆ ತಂದಿದ್ದು ಅದನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ವಿರೋಧ ಪಕ್ಷಗಳು ಸಿಎಎ ವಿರುದ್ಧ ಧ್ವನಿ ಎತ್ತುತ್ತಿವೆ. ನಾವು ಸಿಎಎಯನ್ನು ಹಿಂಪಡೆಯುವ ಮಾತೇ ಇಲ್ಲ. ಸಿಎಎ ಮೂಲಕ ಮತಗಳನ್ನು ಪಡೆಯುವ ತಂತ್ರವನ್ನು ಬಿಜೆಪಿ ಮಾಡುತ್ತಿದೆ ಎನ್ನುವ ವಿರೋಧಪಕ್ಷಗಳ ಮಾತಿಗೆ ಅರ್ಥವಿಲ್ಲ, ಮೋದಿಯವರ ಪ್ರತಿ ಭರವಸೆಯೂ ಈಡೇರಿದೆ ಎಂದು ಅಮಿತ್ ಶಾ ಹೇಳಿದ್ದಾರೆ.