ಪೋಕ್ಸೋ ಪ್ರಕರಣ: ಬಂಧನ ಭೀತಿಯಲ್ಲಿ ಯಡಿಯೂರಪ್ಪ
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬಿರುಸಿನ ಚಟುವಟಿಕೆಯಲ್ಲಿ ತೊಡಗಿದ್ದು ಚುನಾವಣಾ ಪ್ರಚಾರಕ್ಕೆ ಸಿದ್ಧತೆ ನಡೆಸುತ್ತಿರುವ ಮಧ್ಯೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಅವರನ್ನು ಕಾಡುತ್ತಿದೆ.