ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.