ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಜನ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ- ಅಶೋಕ್ ರೈ
ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಜನ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ, ಐದು ಗ್ಯಾರಂಟಿ ಯೋಜನೆಗಳು ಪ್ರತೀ ಮನೆ ಮನೆಗೆ ತಲುಪಿದೆ , ಜನರ ಸಂಕಷ್ಟಗಳಿಗೆ ಸರಕಾರ ಸ್ಪಂದಿಸುವ ಕೆಲಸವನ್ನು ಮಾಡಿದೆ ಈ ಕಾರಣಕ್ಕೆ ಪ್ರತೀಯೊಂದು ಮನೆಗೂ ಕಾಂಗ್ರೆಸ್ ಕಾರ್ಯಕರ್ತರು ಧೈರ್ಯದಿಂದ ವೋಟು ಕೇಳಲು ತೆರಳುಬಹುದಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಕಾವು ಮಾಡ್ನೂರು ಗ್ರಾಮದಲ್ಲಿ ಸುಮಾರು 3 ಕೋಟಿ ರೂ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಒಟ್ಟು 1500 ಕೋಟಿ ರೂ ಅನುದಾನ ಮಂಜೂರಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 1010 ಕೋಟಿ ರೂ ಸೇರಿದಂತೆ ವಿವಿಧ ರಸ್ತೆ ಕಾಮಗಾರಿಗಳು, ದೇವಸ್ಥಾನ, ದೈವಸ್ಥಾನ ಮತ್ತು ಮಸೀದಿ, ತಡೆಗೋಡೆ ಸೇರಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಗತ್ಯ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ. ಪುತ್ತೂರಿಗೆ ಅಗತ್ಯವಾಗಿ ಬೇಕಾಗಿದ್ದ ಮತ್ತು ಜನತೆಯ ಬಹುವರ್ಷಗಳ ಬೇಡಿಕೆಯಾಗಿದ್ದ ಕೆಎಂಎಫ್, ಕೊಯಿಲ ಜಾನುವಾರು ಕೇಂದ್ಚರ, ಬಿರುಮಲೆ ಬೆಟ್ಟ ಅಭಿವೃದ್ದಿ, ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳ ಮತ್ತು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ಅಭಿವೃದ್ದಿ ಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ ಎಂದು ಅವರು ಹೇಳಿದರು.