ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ: ಈಶ್ವರಪ್ಪ ಘೋಷಣೆ
ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರನಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ನಿರಾಶೆಗೊಂಡಿರುವ ಕೆ.ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.
ಶಿವಮೊಗ್ಗದ ಬಂಜಾರ ಹಾಲ್ನಲ್ಲಿ ಈಶ್ವರಪ್ಪ ತಮ್ಮ ಬೆಂಬಲಿಗರ ಸಭೆ ನಡೆಸಿದರು. ಸಭೆಯಲ್ಲಿ ಮುಂದಿನ ನಡೆ ಬಗ್ಗೆ ಮುಖಂಡರ ಅಭಿಪ್ರಾಯ ಕ್ರೋಢೀಕರಿಸಲಾಯಿತು. ಬಳಿಕ ಮಾತನಾಡಿದ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದರು.
ಸ್ವತಂತ್ರವಾಗಿ ಸ್ಪರ್ಧಿಸಿ ನಾನು ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಹೋಗುತ್ತಿಲ್ಲ. ಪಕ್ಷ ಒಂದು ಕುಟುಂಬದ ಕೈಯಲ್ಲಿ ಸಿಲುಕಿರುವುದನ್ನು ಬಿಡಿಸಲು ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.