ಪುತ್ತೂರು ನಗರ ಯೋಜನಾ ಪ್ರಾಧಿಕಾರಕ್ಕೆ ಆಯ್ಕೆ
ಪುತ್ತೂರು : ಪುತ್ತೂರು: ರಾಜ್ಯದ ನಗರ ಯೋಜನಾ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶಿಸಿದ್ದು ಪುತ್ತೂರು ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ, ನೋಟರಿ ಕೆ.ಭಾಸ್ಕರ್ ಕೋಡಿಂಬಾಳ ಆಯ್ಕೆಯಾಗಿದ್ದಾರೆ.
ಸದಸ್ಯರಾಗಿ ಉದ್ಯಮಿ, ರೈ ಎಜುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ನಿಹಾಲ್ ಪಿ ಶೆಟ್ಟಿ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಸನ್ ಹಾಗೂ ನಗರಸಭೆಯ ಮಾಜಿ ಸದಸ್ಯ ಅನ್ವರ್ ಕಾಸಿಂ ಅವರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರಕಾರದ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಯೋಜನಾ ಸೇವೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ.ಅವರು ಮಾ.14ರಂದು ಆದೇಶಿಸಿದ್ದಾರೆ.