ಅರುಣ್ ಕುಮಾರ್ ಪುತ್ತಿಲ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರು ಮಾ.17ರಂದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಅರುಣ್ ಕುಮಾರ್ ಪುತ್ತಿಲ ಅವರ ಮೊದಲ ಭೇಟಿ ಇದಾಗಿದೆ.
ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಪ್ರಮುಖರು ಅರುಣ್ ಪುತ್ತಿಲ ಅವರನ್ನು ಸ್ವಾಗತಿಸಿದರು.
ಪ್ರಸನ್ನ ಕುಮಾರ್ ಮಾರ್ತ, ರವಿ ಕುಮಾರ್, ಪ್ರವೀಣ್ ಶೆಟ್ಟಿ, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಅರುಣ್ ಕುಮಾರ್ ಪುತ್ತಿಲ ಜೊತೆಗಿದ್ದರು.
ಮಾ.16ರಂದು ಅರುಣ್ ಪುತ್ತಿಲ ಅವರು ಮಂಗಳೂರಿನಲ್ಲಿ ಬಿಜೆಪಿ ಜಿಲ್ಲಾ ಕಚೇರಿಗೆ ತೆರಳಿ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಭೇಟಿ ಮಾಡಿದ್ದರು.