ಕ್ರೀಡೆರಾಜ್ಯರಾಷ್ಟ್ರೀಯ

RCB ಕಪ್ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ಕನ್ನಡತಿ ಶ್ರೇಯಾಂಕ ಪಾಟೀಲ್



WPL 2024 ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಮಾ.17ರಂದು ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಟ್ರೋಫಿ ಗೆದ್ದುಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಟ್ರೋಫಿ ಮುಡಿಗೆರಿಸಿಕೊಳ್ಳಲು ಪ್ರಮುಖ ಪಾತ್ರವಹಿಸಿದ್ದು ಕನ್ನಡತಿ ಶ್ರೇಯಾಂಕ ಪಾಟೀಲ್ ಎಂಬುದು ವಿಶೇಷ.

ಶ್ರೇಯಾಂಕಾ ಆರಂಭಿಕ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದರು. ಹಾಗಾಗಿ ಕೆಲವು ಪಂದ್ಯಗಳಿಂದ ಅವರನ್ನು ಹೊರಗಿಡಲಾಗಿತ್ತು.

ಆದರೆ ಮತ್ತೆ ತಂಡದಲ್ಲಿ ಅವಕಾಶ ಪಡೆದ ಬಳಿಕ ಕನ್ನಡತಿ ಶ್ರೇಯಾಂಕ ಅದ್ಭುತ ಪ್ರದರ್ಶನ ನೀಡಿದರು. ಮುಂಬೈ ಇಂಡಿಯನ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಶ್ರೇಯಾಂಕಾ ಕೇವಲ 16 ರನ್ ಬಿಟ್ಟು ಕೊಟ್ಟು 2 ವಿಕೆಟ್ ಕಬಳಿಸಿದರು.

ಫೈನಲ್ ಪಂದ್ಯದಲ್ಲಿ ಶ್ರೇಯಾಂಕಾ ಪಾಟೀಲ್ 3.3 ಓವರ್​ಗಳಲ್ಲಿ ಕೇವಲ 12 ರನ್ ನೀಡಿ 4 ವಿಕೆಟ್ ಉರುಳಿಸುವ ಮೂಲಕ ಎದುರಾಳಿ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದರು.

21 ವರ್ಷದ ಶ್ರೇಯಾಂಕಾ ಪಾಟೀಲ್ ಒಟ್ಟು 13 ವಿಕೆಟ್ ಉರುಳಿಸಿ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ ಚೊಚ್ಚಲ ಟ್ರೋಫಿಗೆ ಮುತ್ತಿಕ್ಕಲು ಇವರು ಮಹತ್ತರ ಪಾತ್ರ ವಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!