ಕಾಂಗ್ರೆಸ್ ಸೇರ್ತಾರಾ ಡಿವಿಎಸ್..?
ಲೋಕಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ನನ್ನನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಈ ಬಗ್ಗೆ ಮನೆಯವರೊಂದಿಗೆ ಮಾತನಾಡಿ, ನಾಳೆ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಸಂಸದ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ. ಇಂದು ನನ್ನ ಹುಟ್ಟುಹಬ್ಬವಿದೆ. ಹಾಗಾಗಿ, ಕಾಂಗ್ರೆಸ್ ನಾಯಕರು ಬಂದು ಭೇಟಿ ಮಾಡಿದ ಬಗ್ಗೆ ಕುಟುಂಬದ ಜೊತೆಗೆ ಮಾತುಕತೆ ಮಾಡಬೇಕಿದೆ. ಇಂದು ಮನೆಯರವರೊಂದೊಗೆ ಚರ್ಚೆ ಮಾಡಿದ ಬಳಿಕ ನಾಳೆ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸುತ್ತೇನೆ. ನಾನು ನನ್ನ ನಿಲುವು ತಿಳಿಸುತ್ತೇನೆ. ನನ್ನ ಪಕ್ಷದ ಪ್ರಮುಖರೊಬ್ಬರು ನನ್ನ ಜೊತೆಗೆ ಸಮಾಲೋಚನೆ ಮಾಡಿದ್ದಾರೆ. ನಿನ್ನೆ ನಮ್ಮ ಮನೆಗೆ ಆಗಮಿಸಿ, ಮಾತುಕತೆ ಮಾಡಿದ್ದಾರೆ. ಅವರು ಹೇಳಿರುವ ಮಾತನ್ನು ನಾನು ಈಗ ಹೇಳಲು ಆಗಲ್ಲ, ನಾಳೆ ಎಲ್ಲವನ್ನೂ ತಿಳಿಸುತ್ತೇನೆ ಎಂದು ಹೇಳಿದ್ದಾರೆ.