ಬಂಟ್ವಾಳ: 2ನೇ ತರಗತಿ ವಿದ್ಯಾರ್ಥಿನಿ ಮೃತ್ಯು
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಆಯಿಷಾ ಶಹಿಮ (7.ವ) ಮೃತಪಟ್ಟ ವಿದ್ಯಾರ್ಥಿನಿ.
ಶಹಿಮಾ ಕೆಲವು ದಿನಗಳ ಹಿಂದೆ ಮನೆಯಲ್ಲಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.