ರಾಜಕೀಯರಾಜ್ಯ

ಕೊನೆಗೂ ತನ್ನ ನಿಲುವು ಸ್ಪಷ್ಟಪಡಿಸಿದ ಡಿವಿಎಸ್ಬಿಜೆಪಿ ಟಿಕೆಟ್​​ ತಪ್ಪಿದ್ದಕ್ಕೆ ನನಗೆ ನೋವಾಗಿದೆ. ನನಗೆ ಕಾಂಗ್ರೆಸ್​ನಿಂದ ಆಹ್ವಾನ ಬಂದಿರುವುದು ಸತ್ಯ. ಬಿಜೆಪಿ ಪಕ್ಷ ಶುದ್ಧೀಕರಣ ನನ್ನ ಮುಖ್ಯ ಉದ್ದೇಶ. ಮುಂದಿನ ದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ. ಮುಂದಿನ ನಡೆ ಏನು ಎಂದು ಹಲವರು ಕೇಳಿದ್ದಾರೆ. ನನ್ನ ಮುಂದಿನ ನಡೆ ಪಕ್ಷ ಶುದ್ಧೀಕರಣ. ನಾನು ಬಿಜೆಪಿ ತೊರೆಯುವುದಿಲ್ಲ, ಕಾಂಗ್ರೆಸ್ ಸೇರುವುದಿಲ್ಲ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಸ್ಪಷ್ಟಪಡಿಸಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ರಾಜ್ಯದಲ್ಲಿ ಬಿಜೆಪಿ ಜನರು ಒಪ್ಪಿಕೊಳ್ಳುವ ಪಕ್ಷ ಆಗಬೇಕು. ಮೋದಿ ಹೇಳಿದ ಬಿಜೆಪಿ ಕರ್ನಾಟಕದಲ್ಲಿ ಇರಬೇಕು. ಮೋದಿ ಹೇಳಿದ ಪರಿವಾರವಾದ ರಹಿತ, ಜಾತಿವಾದ ರಹಿತ ಭ್ರಷ್ಟಾಚಾರ ರಹಿತವಾದ ಪಕ್ಷ ರಾಜ್ಯದಲ್ಲಿ ಇರಬೇಕು. ಇದನ್ನು ಶುದ್ದೀಕರಣಕ್ಕೆ ನಿರಂತರವಾದ ಹೋರಾಟ ನಾನು ಮಾಡುತ್ತೇನೆ ಎಂದರು.

ರಾಜ್ಯದಲ್ಲಿ ಪಕ್ಷದ ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ. ಪಕ್ಷ ನನ್ನ ಮಕ್ಕಳಿಗೆ, ಮನೆಯವರಿಗೆ, ಜಾತಿಯವರಿಗೆ ಚೇಲಾಗಳಿಗೆ ಅಂತಾ ಅವರು ತಿಳಿದುಕೊಂಡಿದ್ದಾರೆ. ಕರ್ನಾಟಕದಲ್ಲಿ ಮನೆಯವರಿಗೆ, ಜಾತಿಯವರಿಗೆ ಪಕ್ಷ ಆಗಬಾರದು ಎಂದರು. ಸುಳ್ಳು ಹೇಳುವ ನಾಯಕರು ಬಿಜೆಪಿಯಲ್ಲಿ ಇರಬಾರದು, ಆಡಳಿತ ಮಾಡುವವರು ಸತ್ಯವಂತರಾಗಬೇಕು. ನನ್ನ ಹೆಸರು ಒಂದೇ ಇದ್ದಾಗ ಅದನ್ನು ಕೇಂದ್ರದಲ್ಲಿ ಸಮರ್ಥವಾಗಿ ಮಂಡನೆ ಮಾಡದೇ ಇದ್ದವರು ನಾಯಕರಾಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲ ಪರೋಕ್ಷವಾಗಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಹಾಗೂ ಆರ್.ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *

error: Content is protected !!