ರಾಜಕೀಯರಾಷ್ಟ್ರೀಯ

ವಿಕಸಿತ ಭಾರತ ಸಂದೇಶಗಳನ್ನು ನಿಲ್ಲಿಸಲು ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ



ವಾಟ್ಸಾಪಲ್ಲಿ ವಿಕಸಿತ ಭಾರತ ಅಭಿಯಾನ(Viksit Bharath) ನಿಲ್ಲಿಸಲು ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಜನರಿಗೆ ವಾಟ್ಸಾಪ್ನಲ್ಲಿ ವಿಕಸಿತ ಭಾರತಕ್ಕೆ ಸಂಬಂಧಿಸಿದ ಸಂದೇಶ ರವಾನೆಯಾಗುತ್ತಿದೆ. ಈ ಸಂದೇಶವು ನರೇಂದ್ರ ಮೋದಿ ಸರ್ಕಾರವನ್ನು ಉತ್ತೇಜಿಸುತ್ತಿದೆ.

ಇದೀಗ ಕೇಂದ್ರ ಚುನಾವಣಾ ಆಯೋಗವು ತಕ್ಷಣವೇ ಜಾರಿಗೆ ಬರುವಂತೆ ಈ ಸಂದೇಶಗಳನ್ನು ಕಳುಹಿಸುವುದನ್ನು ನಿಲ್ಲಿಸುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು ಕೇಳಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೇಶದ ನಾಗರಿಕರ ಮೊಬೈಲ್ ಫೋನ್ ಗಳಿಗೆ ಇಂತಹ ಸಂದೇಶಗಳು ರವಾನೆಯಾಗುತ್ತಿರುವುದು ತಿಳಿದು ಬಂದಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮಾರ್ಚ್ 16 ರಂದು ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಪ್ರಧಾನಿ ನರೇಂದ್ರ ಮೋದಿಯವರ ಸಂದೇಶಗಳನ್ನು ಕಳುಹಿಸಲಾಗಿದೆ ಎಂದು ಸಚಿವಾಲಯವು ಆಯೋಗಕ್ಕೆ ತಿಳಿಸಿತ್ತು.

ನೆಟ್‌ವರ್ಕ್ ಸಮಸ್ಯೆಯಿಂದಾಗಿ ಅವರಿಗೆ ತಲುಪುವುದು ವಿಳಂಬವಾಗಿರಬಹುದು ಎಂದು ಸಚಿವಾಲಯವು ಆಯೋಗಕ್ಕೆ ಮಾಹಿತಿ ನೀಡಿದೆ.

ಈ ಸಂದೇಶಕ್ಕೆ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು.

Leave a Reply

Your email address will not be published. Required fields are marked *

error: Content is protected !!