ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ
ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ED) ಮಾ.21ರಂದು ಬಂಧಿಸಿದೆ. ಕೇಜ್ರಿವಾಲ್‌ರನ್ನು ನಾಳೆ ಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ಅರವಿಂದ ಕೇಜ್ರಿವಾಲ್ರನ್ನು ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು.
ಕೇಜ್ರಿವಾಲ್ ಅವರಿಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಅವರು ಸಲ್ಲಿಸಿದ್ದ ಅರ್ಜಿ ವಜಾ ಬೆನ್ನಲ್ಲೇ ಇಡಿ ಅಧಿಕಾರಿಗಳು ಭೇಟಿ ನೀಡಿ ದೆಹಲಿಯ ನಿವಾಸದಲ್ಲಿ ಶೋಧ ಮಾಡಿದ್ದಾರೆ. ಮುನ್ನೆಚ್ಚರಿಕೆಯಿಂದ ಕೇಜ್ರಿವಾಲ್ ಮನೆಯ ಬಳಿ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.