ಕರಾವಳಿಕ್ರೈಂ

ಬೆಳ್ತಂಗಡಿ: ಪೆಟ್ರೋಲಿಯಂ ಪೈಪ್ ಲೈನ್ ಗೆ ಕನ್ನ- ಲಕ್ಷಾಂತರ ರೂ ಮೌಲ್ಯದ ಡೀಸೆಲ್ ಕಳ್ಳತನಬೆಳ್ತಂಗಡಿ: ಪೆಟ್ರೋಲಿಯಂ ಪೈಫ್ ಲೈನ್’ಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಡೀಸೆಲ್ ಕಳ್ಳತನ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ  ನಡೆದಿದ್ದು ಈ ಬಗ್ಗೆ ಪೆಟ್ರೋನೆಟ್ ಎಂ ಹೆಚ್ ಬಿ ಲಿಮಿಟೆಡ್ ನ ನೆರಿಯದ ಸ್ಟೇಶನ್ ಇನ್ ಚಾರ್ಜ್ ಆಗಿರುವ ರಾಜನ್ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಕಂಪೆನಿಯವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು, ಹಾಸನ ಬೆಂಗಳೂರು ಪೆಟ್ರೋನೆಟ್ ಪೈಪ್ ಮೂಲಕ ಪೆಟ್ರೋಲಿಯಂ ವಸ್ತುಗಳು ಸಾಗಾಟವಾಗುತ್ತಿದ್ದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿ ಮಾ16ರಿಂದ 19ರ ವರೆಗೆ ಕಳ್ಳರು ಪೆಟ್ರೋಲಿಯಂ ಪೈಪ್ ಲೈನ್ ಗೆ ಕನ್ನಕೊರೆದು, ಪೈಪ್ ಲೈನ್ ಗೆ 2.5 ಇಂಚಿನ ಹೆಚ್ ಡಿ.ಪಿ ಇ ಪೈಪ್ ಅ‌ನ್ನು ಅಳವಡಿಸಿ ಸುಮಾರು 12,000ಲೀಟರ್ ಗೂ ಅಧಿಕ ಡೀಸೆಲ್‌ ನ್ನು ಕಳವು ಮಾಡಿದ್ದು ಇದರ ಅಂದಾಜು ಮೌಲ್ಯ ಸುಮಾರು 9,60,000 ಆಗಬಹುದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!