ಕರಾವಳಿಕ್ರೈಂಜಿಲ್ಲೆ

ಕಾರಿಗೆ ಬೆಂಕಿ ಹಚ್ಚಿ ಬೆಳ್ತಂಗಡಿ ಮೂಲದ ಮೂವರ ಕೊಲೆ- 6 ಮಂದಿ ಪೊಲೀಸ್ ವಶಕ್ಕೆ



ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಮೂವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಎಂಬವರು ಸುಮಾರು ಹತ್ತು ದಿನಗಳ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸೋ ಕಾರಿನಲ್ಲಿ ತುಮಕೂರಿಗೆ ಹೋಗಿದ್ದರು ಎನ್ನಲಾಗಿದೆ. ಮೃತ ಮೂವರೂ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!