ಅಡಿಕೆ ಕಳ್ಳತನ ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು
ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣವನ್ನು ಭೇದಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ಮಂಡೆಕೋಲು ಗ್ರಾಮ, ಸುಳ್ಯ ನಿವಾಸಿ ಸುಪೀತ್ ಕೆ (20) ಎಂಬಾತನನ್ನು ವಶಕ್ಕೆ ಪಡೆದು, 83,000/ ರೂ ಮೌಲ್ಯದ 209 ಕೆ ಜಿ ಸುಲಿದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ರೂ 1,00,000/ ಮೌಲ್ಯದ ಆಟೋ ರಿಕ್ಷಾವನ್ನು ಸ್ವಾಧೀನಪಡಿಸಲಾಗಿದೆ. ಜಿಲ್ಲೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಬಿ.ಪಿ ಸಂತೋಷ್ ಹಾಗೂ ಠಾಣಾ ಸಿಬ್ಬಂಧಿಗಳಾದ ನವೀನ ಕೆ, ಕೃಷ್ಣಪ್ಪ, ದೇವರಾಜ್, ಸಂತೋಷ್ ಕೆ ಜಿ, ಸುಭಾಸ್ ಕಿತ್ತೂರ, ಪುರಂದರರವರುಗಳ ತನಿಖಾ ತಂಡ ಕಾರ್ಯಚರಣೆ ನಡೆಸಿರುತ್ತಾರೆ.