ಜಿಲ್ಲೆರಾಜಕೀಯ

ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುನಾವಣಾ ಖರ್ಚಿಗೆಂದು ದೇಣಿಗೆ ನೀಡಿದ ಚುರುಮುರಿ ವ್ಯಾಪಾರಿ..!



ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುನಾವಣಾ ಖರ್ಚಿಗೆಂದು ಚುರುಮುರಿ ವ್ಯಾಪಾರಿಯೊಬ್ಬರು 25,000 ರೂ ದೇಣಿಗೆ ನೀಡಿದ್ದಾರೆ.

ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ 25,000 ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.

ಕೋಟಾ ಶ್ರೀನಿವಾಸ ಪೂಜಾರಿ ಪ್ರಚಾರಕ್ಕೆಂದು ಹೋದಾಗ ಚಿಕ್ಕಮಗಳೂರು ತೇಗೂರು ಸರ್ಕಲ್ ನಲ್ಲಿನ ಚುರುಮುರಿ ವ್ಯಾಪಾರಿ ಲೊಕೇಶ್ ಎಂಬವರು ಕೋಟಾಗೆ 25 ಸಾವಿರ ಹಣವನ್ನ ಚುನಾವಣಾ ಖರ್ಚಿಗಾಗಿ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!