ಚೆನ್ನೈ ಆಸ್ಪತ್ರೆಯಿಂದ ಮಾಜಿ ಸಿಎಂ ಹೆಚ್ಡಿಕೆ ಡಿಸ್ಚಾರ್ಜ್
ಬೆಂಗಳೂರು: ಹೃದಯದ ಶಸ್ತ್ರಚಿಕಿತ್ಸೆಗಾಗಿ ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕುಮಾರಸ್ವಾಮಿ ಇಂದು ವಿಶೇಷ ವಿಮಾನದ ಮೂಲಕ ಚೆನ್ನೈನಿಂದ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಇದು ನನಗೆ ಪುನರ್ಜನ್ಮ ಎಂದೇ ಹೇಳಬಹುದು. ಅಭಿಮಾನಿಗಳ, ಹಿತೈಷಿಗಳ ಪ್ರಾರ್ಥನೆ ಫಲ ಕೊಟ್ಟಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.