ರಾಜಕೀಯರಾಷ್ಟ್ರೀಯ

ಲೋಕಸಭಾ ಚುನಾವಣೆ: ಬಿಜೆಪಿ 5ನೇ ಪಟ್ಟಿ ಬಿಡುಗಡೆ



ಲೋಕಸಭಾ ಚುನಾವಣೆಗೆ ಬಿಜೆಪಿ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದ್ದು , ಅಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ.

ಚಿಕ್ಕಬಳ್ಳಾಪುರಕ್ಕೆ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಟಿಕೆಟ್ ನೀಡಲಾಗಿದೆ. ರಾಯಚೂರು ಎಸ್ ಟಿ ಮೀಸಲು ಕ್ಷೇತ್ರದಲ್ಲಿ ರಾಜ ಅಮರೇಶ್ವರ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ.

ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿ ಇನ್ನಷ್ಟೇ ಘೋಷಿಸಬೇಕಿದೆ. ಬಿಜೆಪಿ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ, ಕೋಲಾರವನ್ನು ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.

Leave a Reply

Your email address will not be published. Required fields are marked *

error: Content is protected !!