ಕರಾವಳಿ

ಬೆಳ್ತಂಗಡಿ: ತುಮಕೂರಿನಲ್ಲಿ ಭೀಕರವಾಗಿ ಹತ್ಯೆಗೊಳಗಾದವರ ಮನೆಗೆ ಇನಾಯತ್ ಅಲಿ ಭೇಟಿ



ಬೆಳ್ತಂಗಡಿ: ತುಮಕೂರಿನಲ್ಲಿ ಹತ್ಯೆಗೊಳಗಾದ ಬೆಳ್ತಂಗಡಿ ತಾಲೂಕಿನ ಇಸಾಕ್, ಶಾಹುಲ್ ಹಮೀದ್ ಹಾಗೂ ಇಮ್ತಿಯಾಝ್ ಸಿದ್ದೀಕ್ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬ ಸದಸ್ಯರ ಜೊತೆ ಮಾತನಾಡಿ ಸಾಂತ್ವನ ಹೇಳಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಲ್ಲಿ ಮಾತನಾಡಿದ್ದು ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಲ್ಲಿಯೂ ಮನವಿ ಮಾಡಿದ್ದೇನೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರವನ್ನು ಒದಗಿಸುವಂತೆಯೂ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ ಎಂದು ಇನಾಯತ್ ಅಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!