ಕರಾವಳಿ

ಕಬಕ: ಕಾರಿನಲ್ಲಿ ಗೋ ಸಾಗಾಟ, ಆರೋಪಿಗಳು ಪರಾರಿ



ಪುತ್ತೂರು: ಸ್ವಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಸಂದರ್ಭ ಕಾರು ರಸ್ತೆ ಬದಿಗೆ ಡಿಕ್ಕಿ ಹೊಡೆ ಘಟನೆ ಕಬಕದಲ್ಲಿ ನಡೆದಿದೆ.

ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!