ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ರಾಜೀನಾಮೆ
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ತಾನು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ತೇಜಸ್ವಿನಿ ಗೌಡ ಅವರ ಪರಿಷತ್ ಸದಸ್ಯ ಸ್ಥಾನದ ಅವಧಿ ಜೂನ್ 24ರಂದು ಕೊನೆ ದಿನವಾಗಿತ್ತು.