ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದ ನಿರ್ಮಲಾ ಸೀತಾರಾಮನ್
ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ, ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಾನು ನಿರಾಕರಿಸಿದ್ದೇನೆ ಎಂದಿರುವ ನಿರ್ಮಲಾ ಸೀತಾರಾಮನ್ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನನಗೆ ನೀಡಿದ್ದರು ನಾನು ಆಲೋಚನೆ ಮಾಡಿ ನನ್ನ ನಿರ್ಧಾರ ತಿಳಿಸಿದೆ, ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.