ರಾಜಕೀಯರಾಜ್ಯ

ಕಾಂಗ್ರೆಸ್ ವಿರುದ್ಧ ಜಗದೀಶ್ ಶೆಟ್ಟರ್ ವಾಗ್ದಾಳಿ

ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ. ಗ್ಯಾರಂಟಿ ಯೋಜನೆಗಳ ಪರಿಣಾಮ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ.
ಕಾಂಗ್ರೆಸ್ ಸರಕಾರದಿಂದ ಯಾವ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ಅನುದಾನ ಬಿಡುಗಡೆ ಆಗುತ್ತಿಲ್ಲ ಎಂದು ಸ್ವತಃ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದ ಕೂಡಲೇ ಅವರ ಮನಸ್ಥಿತಿ ಬದಲಾಗಲ್ಲ. ಜನ ಅದಕ್ಕೆ ಮರುಳಾಗುವುದೂ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲೋಕಸಭಾ ಚುನಾವಣೆ ನಂತರ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತದೆ. ಈಗಾಗಲೇ ಅವರಿಗೆ ಭಯ ಶುರುವಾಗಿದೆ. ಚುನಾವಣೆ ಆದ ಮೇಲೆ ಯಾವುದೇ ಕ್ಷಣದಲ್ಲಿ ಸರಕಾರ ಪತನವಾಗಲಿದೆ ಎಂದು ಶೆಟ್ಟರ್ ಹೇಳಿದರು.

ಕಾಂಗ್ರೆಸ್ ಸರಕಾರ ಬಂದ ಮೇಲೆ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆ ರದ್ದುಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಇದುವರೆಗೆ ಅದು ಸಾಧ್ಯವಾಗಿಲ್ಲ. ಹಾಗಿದ್ದರೆ ಬಿಜೆಪಿ ತಂದಿರುವ ಈ ಕಾಯ್ದೆಗಳ ಬಗ್ಗೆ ತಮ್ಮ ನಿಲುವೇನು ಎಂಬುದನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು ಎಂದು ಶೆಟ್ಟರ್ ಸವಾಲು ಹಾಕಿದರು.


ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆನ್ನುವ ಉದ್ದೇಶಕ್ಕೆ ನಾವೆಲ್ಲ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದು ಪಕ್ಷದ ಲಕ್ಷಾಂತರ ಕಾರ್ಯಕರ್ತರೇ ನಮ್ಮ ಶಕ್ತಿಯಾಗಿದ್ದಾರೆ, ಬೆಳಗಾವಿಯ ಜನತೆ ನನಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ಪೂರ್ಣ ವಿಶ್ವಾಸ ನನಗಿದೆ ಎಂದು ಶೆಟ್ಟರ್ ಹೇಳಿದರು.

Leave a Reply

Your email address will not be published. Required fields are marked *

error: Content is protected !!