ದ್ವಿಚಕ್ರ ವಾಹನ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು, ಯುವತಿ ಗಂಭೀರ
ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಗುರುವಾರ ರಾತ್ರಿ ಶೇಖರ್ ಬಂಗೇರ ಹೇರಾಜೆ(65ವ) ಎಂಬವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸ್ಕೂಟರ್ ನಲ್ಲಿದ್ದ ಬೆಳ್ತಂಗಡಿಯ ಗೇರುಕಟ್ಟೆ ನಿವಾಸಿ ಅನುಷಾ (19ವ) ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ.