ಕಡಬ: ಮನೆಯೊಂದರಲ್ಲಿ ಅಕ್ರಮವಾಗಿ ಗೋಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ
ಮನೆಯೊಂದರಲ್ಲಿ ಗೋ ಮಾಂಸ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಕೊಯಿಲ ಕೆಮ್ಮಾರ ಆಕೀರ ಎಂಬಲ್ಲಿ ನಡೆದಿದೆ.
ಕಡಬ ತಾಲೂಕು ಕೊಯಿಲ ಗ್ರಾಮದ ಕೆಮ್ಮಾರ ಆಕೀರ ಎಂಬಲ್ಲಿ, ಇಲ್ಯಾಸ್ ಎನ್ನುವವರ ಮನೆಯಲ್ಲಿ ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಕಡಬ ಪೊಲೀಸ್ ಠಾಣಾ ಪಿ.ಎಸ್.ಐ ಅಭಿನಂಧನ್ ಎಂ.ಎಸ್ ಹಾಗೂ ಸಿಬ್ಬಂದಿಗಳು ಮಾ.28 ರಂದು ದಾಳಿ ಮಾಡಿದ್ದು, ಕೊಯಿಲ ಗ್ರಾಮದ ಇಲ್ಯಾಸ್ ಮತ್ತು ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಮಹಮ್ಮದ್ ಆಮು ಎಂಬವರು ಅಕ್ರಮವಾಗಿ ಜಾನುವಾರುಗಳ ವಧೆ ಮಾಡುತ್ತಿರುವುದು ಕಂಡು ಬಂದಿರುತ್ತದೆ.
ಸ್ಥಳದಲ್ಲಿದ್ದ ಜಾನುವಾರುಗಳ ಮಾಂಸ, ತ್ಯಾಜ್ಯ ಹಾಗೂ ಜಾನುವಾರು ವಧೆಗೆ ಬಳಸಿದ ಸೊತ್ತುಗಳು ಸ್ವಾದೀನಪಡಿಸಿಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಇಲ್ಯಾಸ್ ಹಾಗೂ ಸ್ಥಳದಿಂದ ಓಡಿಹೋಗಿರುವ ಮಹಮ್ಮದ್ ಆಮು ವಿರುದ್ದ, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.