ಎ.2: ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ
ಲೋಕಸಭಾ ಚುನಾವಣೆ ಪ್ರಚಾರದ ಭಾಗವಾಗಿ ಪುತ್ತೂರು ಬಿಜೆಪಿ ವತಿಯಿಂದ ಕಾರ್ಯಕರ್ತರ ಸಮಾವೇಶ ಎ.2ರಂದು ಬೈಪಾಸ್ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ತಿಳಿಸಿದ್ದಾರೆ.

ಮಾ.30ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಮಾವೇಶದ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದು ಸಮಾವೇಶಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಆಹ್ವಾನಿಸಲಾಗಿದ್ದು, ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ 221 ಬೂತ್ ನ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರದ ಕಾರ್ಯಕರ್ತರು, ಜನಪ್ರತಿನಿಧಿಗಳು ಸೇರಿದಂತೆ ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮಂಗಳೂರು ವಿಭಾಗ ಸಹ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್, ಹರಿಪ್ರಸಾದ್ ಯಾದವ್ ಉಪಸ್ಥಿತರಿದ್ದರು.